ಡಿಸೆಂಬರ್ 21, 2020

004: ಗಜಲ್

 ಆಗಸದಲ್ಲಿ ನೇಸರ ಹುಟ್ಟುತಿದ್ದಾನೆ ನೋಡಿ 

ಕನಸುಗಳು ಮೂಟೆ ತರುತಿದ್ದಾನೆ ನೋಡಿ

 

ಇರುಳು ಕಳೆದು ಹೋಗಿದೆ ಹಗಲಿನ ಒಡಲಲ್ಲಿ

ಚೈತನ್ಯವನ್ನು ಹೊತ್ತು ಬಂದಿದ್ದಾನೆ ನೋಡಿ

 

ಮೂಡಣದಲ್ಲಿ ರವಿ ಅಂಬೆಗಾಲು ಇಡುತಿರುವನು 

ಅಕ್ಷಯ ಉಲ್ಲಾಸವನ್ನು ಹಂಚುತಿದ್ದಾನೆ ನೋಡಿ


ಅವನಿಯನ್ನು ಹೊಂಗಿರಣಗಳು ಚುಂಬಿಸುತಿವೆ

ಪಾದರಸದ ಚಲನೆಯನ್ನು ನೀಡುತಿದ್ದಾನೆ ನೋಡಿ

 

ಹಕ್ಕಿಗಳ ಚಿಲಿಪಿಲಿಯು ಹೃದಯವನ್ನು ತಟ್ಟುತ್ತಿದೆ

ನಿರಾಸೆಯ ಕೊಳೆಯನ್ನು ತೊಳೆಯುತಿದ್ದಾನೆ ನೋಡಿ

 

ಗಿಡ-ಮರಗುಳು ತಂಗಾಳಿಯಿಂದ ಸ್ವಾಗತಿಸುತಿವೆ

ಬಾಳಿನ ಅನನ್ಯ ಕಲೆಯನ್ನು ಕಲಿಸುತಿದ್ದಾನೆ ನೋಡಿ

 

ಹಾಸಿಗೆಯನ್ನು ತೊರೆದು ಹೊರಗೆ ನೋಡು ಮಲ್ಲಿ

ಮಂದಹಾಸದ ಪಾಠವನ್ನು ಹೇಳುತಿದ್ದಾನೆ ನೋಡಿ




-✍️ರತ್ನರಾಯಮಲ್ಲ

9986353288 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ